News Date: 1--4--2019

News Date: 1--4--2019 - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು News Date: 1--4--2019, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : News Date: 1--4--2019
ಲಿಂಕ್ : News Date: 1--4--2019

ಓದಿ


News Date: 1--4--2019

ಲೋಕಸಭಾ ಚುನಾವಣೆ:
**********************
ನಾಲ್ಕನೇ ದಿನದಂದು ಮೂವರು ಅಭ್ಯರ್ಥಿಗಳಿಂದ 03 ನಾಮಪತ್ರಗಳು ಸಲ್ಲಿಕೆ
******************************************************************
ಕಲಬುರಗಿ,ಏ.01.(ಕ.ವಾ.)-ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರಕ್ಕೆ 2019ರ ಏಪ್ರಿಲ್ 23ರಂದು ನಡೆಯುವ ಚುನಾವಣೆಗಾಗಿ ನಾಮಪತ್ರ ಸಲ್ಲಿಕೆಗೆ ನಾಲ್ಕನೇ ದಿನವಾದ ಸೋಮವಾರದಂದು ಮೂವರು ಅಭ್ಯರ್ಥಿಗಳಿಂದ 03 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ. ರಾಷ್ಟ್ರೀಯ ಸಮಾಜ ಪಕ್ಷದಿಂದ ದತ್ತಪ್ಪ ಕೃಷ್ಣಪ್ಪ ಅವರು 01 ನಾಮಪತ್ರ, ಭಾರತದ ಕೋಮುಗಳ ಸಮಾಜವಾದಿ ಏಕತೆ ಕೇಂದ್ರ ಪಕ್ಷದಿಂದ ಶರಣಪ್ಪ ಮಲ್ಲಿಕಾರ್ಜುನ ಅವರು 01 ನಾಮಪತ್ರ ಹಾಗೂ ಜಿ. ತಿಮ್ಮರಾಜು ಗಂಗಪ್ಪ ಅವರು ಸ್ವತಂತ್ರ ಅಭ್ಯರ್ಥಿಯಾಗಿ 01 ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಏಪ್ರಿಲ್ 4 ರಂದು ಕೊನೆಯ ದಿನವಾಗಿದೆ. ಏಪ್ರಿಲ್ 05 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ನಾಮಪತ್ರಗಳನ್ನು ಹಿಂದಕ್ಕೆ ಪಡೆಯುವ ಕೊನೆಯ ದಿನ ಏಪ್ರಿಲ್ 8 ಇರುತ್ತದೆ. ಇಲ್ಲಿಯವರೆಗೆ ಆರು ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಸಿದಂತಾಗಿದೆ.
ಚುನಾವಣಾ ಕರ್ತವ್ಯದಿಂದ ವಿನಾಯಿತಿ ಪಡೆಯಲು ಸಮಿತಿ ರಚನೆ
********************************************************
ಕಲಬುರಗಿ,ಏ.01.(ಕ.ವಾ.)-5-ಗುಲಬರ್ಗಾ ಲೋಕಸಭಾ (ಮೀಸಲು) ಮತಕ್ಷೇತ್ರದ ಚುನಾವಣಾ ಕಾರ್ಯಕ್ಕಾಗಿ ನಿಯೋಜಿಸಲಾಗಿರುವ ಸಿಬ್ಬಂದಿಗಳು ಅಸಮರ್ಥರಾಗಿದ್ದಲ್ಲಿ ಅಂತಹ ಸಿಬ್ಬಂದಿಗಳು ಚುನಾವಣಾ ಕಾರ್ಯದಿಂದ ವಿನಾಯಿತಿ ಪಡೆಯಲು ಕಲಬುರಗಿ ಹೊಸ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಒಂದು ಸಮಿತಿ ರಚಿಸಲಾಗಿದೆ. ಅಂತಹ ಸಿಬ್ಬಂದಿಗಳು ಇದೇ ಏಪ್ರಿಲ್ 2 ಹಾಗೂ 3 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಖುದ್ದಾಗಿ ಸಮಿತಿ ಮುಂದೆ ಹಾಜರಾಗಬೇಕೆಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.
ಈ ಚುನಾವಣೆ ಕಾರ್ಯಕ್ಕಾಗಿ ಈಗಾಗಲೇ ಮತಗಟ್ಟೆ ಅಧ್ಯಕ್ಷಾಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಹಾಗೂ ಇತರೆ ಸಿಬ್ಬಂದಿಗಳಿಗೆ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ವಿಶೇಷವಾಗಿ ವೈದ್ಯಕೀಯ ಆಧಾರದ ಮೇರೆಗೆ ವಿನಾಯತಿ ಕೋರುವವರು ಮೇಲ್ಕಂಡ ಸಮಿತಿಗೆ ಪೂರಕ ದಾಖಲೆಗಳನ್ನು ಸಲ್ಲಿಸಿ ವ್ಯೆದ್ಯರ ತಂಡದಿಂದ ಪರೀಕ್ಷೆಗೆ ಒಳಪಟ್ಟು ಮುಂದಿನ ಕ್ರಮ ಜರುಗಿಸಲಾಗುತ್ತದೆ. ಅನಾವಶ್ಯಕವಾಗಿ ಸಕಾರಣಗಳಿಲ್ಲದೇ ಚುನಾವಣೆ ಕರ್ತವ್ಯದಿಂದ ವಿನಾಯಿತಿಗಾಗಿ ಅರ್ಜಿ ಸಲ್ಲಿಸಿದ್ದಲ್ಲಿ ಇಂತಹ ಸಿಬ್ಬಂದಿಗಳ ವಿರುದ್ದ ಚುನಾವಣಾ ಕಾರ್ಯಕ್ಕೆ ಅಡೆತಡೆ ಮಾಡಲಾಗಿದೆ ಎಂದು ಭಾವಿಸಿ ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುತ್ತದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಅವರು ಈ ಸಮಿತಿಗೆ ಅಧ್ಯಕ್ಷರಾಗಿದ್ದು, ಕಲಬುರಗಿ ಜಿಮ್ಸ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞರು ಹಾಗೂ ಅಧೀಕ್ಷಕರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮತ್ತು ಎನ್.ಐ.ಸಿ.ಯ ಡಿಐಓ ಅವರು ಈ ಸಮಿತಿ ಸದಸ್ಯರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.
ಏಪ್ರಿಲ್ 2ರಂದು ಪೊಲೀಸ್ ಧ್ವಜ ದಿನಾಚರಣೆ
**************************************
ಕಲಬುರಗಿ,ಏ.01.(ಕ.ವಾ.)-ಕಲಬುರಗಿ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಏಪ್ರಿಲ್ 2ರಂದು ಬೆಳಿಗ್ಗೆ 8 ಗಂಟೆಗೆ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಿವೃತ್ತ ಡಿ.ಎ.ಆರ್. ಎ.ಆರ್.ಎಸ್.ಐ. ಅಪ್ಸರ್ ಅಲಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಪರೇಡ್ ವಂದನೆ ಸ್ವೀಕರಿಸುವರು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟೀನ್ ಮಾರ್ಬನ್ಯಾಂಗ್ ಅವರು ತಿಳಿಸಿದ್ದಾರೆ.
ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮನೀಷ ಖರ್ಬಿಕರ್ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜಾ ಪಿ. ಹಾಗೂ ಕಲಬುರಗಿ ಮಹನಗರ ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಏಪ್ರಿಲ್ 1 ರಿಂದ ಆಹಾರ ಅದಾಲತ್
*******************************
ಕಲಬುರಗಿ,ಏ.01.(ಕ.ವಾ.)-ಕಲಬುರಗಿ ಜಿಲ್ಲೆಯ ವಿವಿಧ ತಾಲೂಕಿನ ಆಯ್ದ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿ, ಪಡಿತರ ವಿತರಣೆ, ಅಡುಗೆ ಅನಿಲ ಸಮಸ್ಯೆಗಳು ಸೇರಿದಂತೆ ಗ್ರಾಹಕರ ಕುಂದುಕೊರತೆ ಆಲಿಸಲು ಏಪ್ರಿಲ್ ಮಾಹೆಯಲ್ಲಿ ಆಹಾರ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಕಲಬುರಗಿ ಜಿಲ್ಲೆಯ ಹಿರಿಯ ಉಪನಿರ್ದೇಶಕ ಡಾ.ರಾಮೇಶ್ವರಪ್ಪ ತಿಳಿಸಿದ್ದಾರೆ.
ಆಹಾರ ಅದಾಲತ್ ನಡೆಯುವ ದಿನಾಂಕ, ತಾಲೂಕು ಮತ್ತು ಪಡಿತರ ಅಂಗಡಿಗಳ ವಿವರ ಇಂತಿದೆ.
ಏಪ್ರಿಲ್ 01: ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಕಲಬುರಗಿ ಗ್ರಾಮಾಂತರಕ್ಕೆ ಸಂಬಂಧಿಸಿದ ಕಮಲಾಪುರ ನ್ಯಾಯ ಬೆಲೆ ಅಂಗಡಿ ಸಂಖ್ಯೆ 1 (ಕಮಲಾಪುರ ಗ್ರಾಮದಲ್ಲಿರುವ ಉಳಿದ ಅಂಗಡಿಗಳ ಸಂಖ್ಯೆ 2, 3 ಮತ್ತು 4).
ಏಪ್ರಿಲ್ 02: ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಕಲಬುರಗಿ ಪಡಿತರಕ್ಕೆ ಸಂಬಂಧಿಸಿದ ನ್ಯಾಯ ಬೆಲೆ ಅಂಗಡಿ ಸಂಖ್ಯೆ 202 ಮತ್ತು ಕಲಬುರಗಿ ಗಂಜ್ 188 ರಲ್ಲಿ. ಏಪ್ರಿಲ್ 03: ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಚಿಂಚೋಳಿ ತಾಲೂಕಿನ ಹೊಡೆಬೀರನಹಳ್ಳಿ ನ್ಯಾಯ ಬೆಲೆ ಅಂಗಡಿ ಸಂಖ್ಯೆ 02 ಹಾಗೂ ಸೈದಾಪುರ ನ್ಯಾಯ ಬೆಲೆ ಅಂಗಡಿ ಸಂಖ್ಯೆ 84ರಲ್ಲಿ.
ಏಪ್ರಿಲ್ 05: ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಅಫಜಲಪುರ ತಾಲೂಕಿನ ಕರಜಗಿ ನ್ಯಾಯ ಬೆಲೆ ಅಂಗಡಿ ಸಂಖ್ಯೆ 67 ಮತ್ತು 68ರಲ್ಲಿ ಹಾಗೂ ಅಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಮಾಶಾಳ ನ್ಯಾಯ ಬೆಲೆ ಅಂಗಡಿ ಸಂಖ್ಯೆ 95. ಏಪ್ರಿಲ್ 08: ಸೇಡಂ ತಾಲೂಕಿನ ಕೋಲಕುಂದಾ ನ್ಯಾಯ ಬೆಲೆ ಅಂಗಡಿ ಸಂಖ್ಯೆ 27ರಲ್ಲಿ ಹಾಗೂ ಅಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಮದನಾ ನ್ಯಾಯ ಬೆಲೆ ಅಂಗಡಿ ಸಂಖ್ಯೆ 28. ಏಪ್ರಿಲ್ 10: ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಆಳಂದ ತಾಲೂಕಿನ ಲಾಡ ಚಿಂಚೋಳಿ ನ್ಯಾಯ ಬೆಲೆ ಅಂಗಡಿ ಸಂಖ್ಯೆ 63 ಹಾಗೂ ಅಂದು ಮಧ್ಯಾಹ್ನ 2.30 ರಿಂದ 4.30 ಗಂಟೆಯವರೆಗೆ ಕಡಗಂಚಿ ನ್ಯಾಯ ಬೆಲೆ ಅಂಗಡಿ ಸಂಖ್ಯೆ 34 ಮತ್ತು 93ರಲ್ಲಿ.
ಏಪ್ರಿಲ್ 12: ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜೇವರ್ಗಿ ತಾಲೂಕಿನ ಸೊನ್ನ ನ್ಯಾಯ ಬೆಲೆ ಅಂಗಡಿ ಸಂಖ್ಯೆ 56 ರಲ್ಲಿ ಹಾಗೂ ಅಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಮುತ್ತಕೋಡ ನ್ಯಾಯ ಬೆಲೆ ಅಂಗಡಿ ಸಂಖ್ಯೆ 55 ರಲ್ಲಿ. ಏಪ್ರಿಲ್ 15: ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಕಲಬುರಗಿ ಗ್ರಾಮಾಂತರಕ್ಕೆ ಸಂಬಂಧಿಸಿದ ಸಾವಳಗಿ (ಬಿ) ನ್ಯಾಯ ಬೆಲೆ ಅಂಗಡಿ ಸಂಖ್ಯೆ 86 ಮತ್ತು 87 ಸಾವಳಗಿ (ಬಿ). ಏಪ್ರಿಲ್ 16: ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಕಲಬುರಗಿ ಪಡಿತರಕ್ಕೆ ಸಂಬಂಧಿಸಿದ ತಾರಫೈಲ್‍ನ ಬಿ.ಎಸ್. ಕಣಮಸ್ ನ್ಯಾಯ ಬೆಲೆ ಅಂಗಡಿ ಸಂಖ್ಯೆ 127.
ಏಪ್ರಿಲ್ 22: ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಚಿತ್ತಾಪುರ ತಾಲೂಕಿನ ಗೋಟೂರು ನ್ಯಾಯ ಬೆಲೆ ಅಂಗಡಿ ಸಂಖ್ಯೆ 112. ಏಪ್ರಿಲ್ 24: ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಆಳಂದ ತಾಲೂಕಿನ ಕಿಣ್ಣಿ ಅಬ್ಬಾಸ್ ನ್ಯಾಯಬೆಲೆ ಅಂಗಡಿ ಸಂಖ್ಯೆ 55 ಮತ್ತು 88ರಲ್ಲಿ ಹಾಗೂ ಅಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಲಿಂಗದಳ್ಳಿ ನ್ಯಾಯಬೆಲೆ ಅಂಗಡಿ ಸಂಖ್ಯೆ 67.ಏಪ್ರಿಲ್ 26: ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಚಿತ್ತಾಪುರ ತಾಲೂಕಿನ ಮಾಡಬೂಳ ತಾಂಡಾ ನ್ಯಾಯ ಬೆಲೆ ಅಂಗಡಿ ಸಂಖ್ಯೆ 104 ಹಾಗೂ ಅಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಕಾಳಗಿ ನ್ಯಾಯ ಬೆಲೆ ಅಂಗಡಿ ಸಂಖ್ಯೆ: 113,114 ಮತ್ತು 115.
ಏಪ್ರಿಲ್ 29: ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಅಫಜಲಪುರ ತಾಲೂಕಿನ ಅಳ್ಳಗಿ (ಬಿ) ನ್ಯಾಯ ಬೆಲೆ ಅಂಗಡಿ ಸಂಖ್ಯೆ: 69 ಮತ್ತು 70 ಹಾಗೂ ಏಪ್ರಿಲ್ 30: ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಶಹಾಬಾದ-ವಾಡಿ ಪಡಿತರಕ್ಕೆ ಸಂಬಂಧಿಸಿದ ವಾಡಿ ನ್ಯಾಯ ಬೆಲೆ ಅಂಗಡಿ ಸಂಖ್ಯೆ: 170 ಮತ್ತು 179.
ಆಹಾರ ಅದಾಲತ್‍ಗಳಲ್ಲಿ ಪಡಿತರ ಚೀಟಿಗಳ ಸಮಸ್ಯೆ, ಪಡಿತರ ವಿತರಣೆ ಸಮಸ್ಯೆ ಹಾಗೂ ಅಡಿಗೆ ಅನಿಲ ಸಮಸ್ಯೆಗಳು ಮತ್ತು ಇತರೆ ಗ್ರಾಹಕರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಆಹಾರ ಅದಾಲತ್‍ಗಳಲ್ಲಿ ನೀಡಿ ಪರಿಹಾರ ಕಂಡುಕೊಳ್ಳಬಹುದು.
ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ವಿಶೇಷ ಬಸ್‍ಗಳ ಕಾರ್ಯಾಚರಣೆ
**********************************************************************
ಕಲಬುರಗಿ,ಏ.01.(ಕ.ವಾ.)-ಇದೇ ಏಪ್ರಿಲ್ 5 ರಂದು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರಗಿ ವಿಭಾಗ-1ರಿಂದ ಶ್ರೀಶೈಲಂನಲ್ಲಿ ಜರುಗಲಿರುವ ಜಾತ್ರೆಗೆ ಹೋಗುವ ಭಕ್ತರ ಅನುಕೂಲಕ್ಕಾಗಿ ಇದೇ ಏಪ್ರಿಲ್ 4 ರಿಂದ 7 ರವರೆಗೆ ಕಲಬುರಗಿ, ಚಿಂಚೋಳಿ, ಚಿತ್ತಾಪೂರ, ಕಾಳಗಿ ಹಾಗೂ ಸೇಡಂ ಘಟಕಗಳಿಂದ ಶ್ರೀಶೈಲಂಗೆ ವಿಶೇಷ ಬಸ್‍ಗಳ ಕಾರ್ಯಾಚರಣೆಯ ವ್ಯವಸ್ಥೆ ಮಾಡಲಾಗಿದೆ ಎಂದು ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜ ಶಿರೋಳಿ ಅವರು ತಿಳಿಸಿದ್ದಾರೆ.
ಘಟಕಗಳ ವ್ಯಾಪ್ತಿಗೆ ಬರುವ ಕಲಬುರಗಿ, ಸೇಡಂ, ಚಿಂಚೋಳಿ, ಚಿತ್ತಾಪೂರ, ಕಾಳಗಿ, ಕಮಲಾಪುರ ಹಾಗೂ ಶಹಾಬಾದ ತಾಲೂಕು ಪ್ರದೇಶದಿಂದ ಹಾಗೂ ಇನ್ನಿತರ ಗ್ರಾಮಗಳಿಂದ ನೇರವಾಗಿ 45 ರಿಂದ 50 ಜನರು ಒಟ್ಟಿಗೆ ಸೇರಿ ಶ್ರೀಶೈಲಂಗೆ ಪ್ರಯಾಣಿಸಲು ಭಕ್ತಾದಿಗಳು ಮುಂದೆ ಬಂದಲ್ಲಿ ಪ್ರಯಾಣಿಕರು ಪ್ರ್ರಯಾಣಿಸುವ ಸ್ಥಳದಿಂದಲೇ ನೇರವಾಗಿ ಶ್ರೀಶೈಲಂಗೆ ಹೆಚ್ಚಿನ ವಾಹನಗಳ ಸಾರಿಗೆ ಸೌಕರ್ಯ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.
ವಿಭಾಗೀಯ ಸಾರಿಗೆ ಅಧಿಕಾರಿ ಮೊಬೈಲ್ ಸಂಖ್ಯೆ 7760992102, ವಿಭಾಗೀಯ ತಂತ್ರಿಕ ಶಿಲ್ಪಿ ಮೊಬೈಲ್ ಸಂಖ್ಯೆ 7760992101, ಕಲಬುರಗಿ ಘಟಕ-1ರ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ 7760992113, ಚಿಂಚೋಳಿ ಘಟಕದ ಘಟಕ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ 7760992117, ಚಿತ್ತಾಪುರ ಘಟಕದ ಘಟಕ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ 7760992119, ಸೇಡಂ ಘಟಕದ ಘಟಕ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ 7760992466, ಕಾಳಗಿ ಘಟಕದ ಘಟಕ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ 7760992120 ಹಾಗೂ ವಿಭಾಗೀಯ ಕಛೇರಿಯ ಸಹಾಯಕ ಸಂಚಾರ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ 7760992108 ಗಳಿಗೆ ಸಂಪರ್ಕಿಕು. ಸಾರ್ವಜನಿಕ ಪ್ರಯಾಣಿಕರು, ಯಾತ್ರಾರ್ಥಿಗಳು ಈ ಹೆಚ್ಚುವರಿ ವಿಶೇಷ ಬಸ್‍ಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀಶೈಲಂ ಶ್ರೀ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವ:ವಿಭಾಗ-2ರಿಂದ ವಿಶೇಷ ಬಸ್‍ಗಳ ಕಾರ್ಯಾಚರಣೆ
ಕಲಬುರಗಿ,ಏ.01.(ಕ.ವಾ.)-ಚಂದ್ರಮಾನ ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲಂನಲ್ಲಿ ಇದೇ ಏಪ್ರಿಲ್ 3 ರಿಂದ 8 ರವರೆಗೆ ಜಾತ್ರಾ ಮಹೋತ್ಸವವು ಜರುಗಲಿದೆ. ಏಪ್ರಿಲ್ 6 ರಂದು ರಥೋತ್ಸವ ಇರುತ್ತದೆ. ಇದರ ಹಿನ್ನೆಲೆಯಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗ-2ದಿಂದ ಜಾತ್ರಾ ಮಹೋತ್ಸವಕ್ಕೆ ಹೋಗುವ ಭಕ್ತಾಧಿಗಳ ಅನುಕೂಲಕ್ಕಾಗಿ ಇದೇ ಏಪ್ರಿಲ್ 3 ರಿಂದ 8ರವರೆಗೆ ಕಲಬುರಗಿ, ಆಳಂದ, ಜೇವರ್ಗಿ, ಗಾಣಗಾಪುರ ಹಾಗೂ ಅಫಜಲಪುರಗಳಿಂದ ಶ್ರೀಶೈಲಂಗೆ ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಕಲಬುರಗಿ ವಿಭಾಗ-2ರ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಡಿ. ಭಾವಿಕಟ್ಟಿ ಅವರು ತಿಳಿಸಿದ್ದಾರೆ.
ಯಾವುದೇ ಗ್ರಾಮೀಣ ಪ್ರದೇಶಗಳಿಂದ ಶ್ರೀಶೈಲಂಗೆ ಹೋಗಲು ಕನಿಷ್ಟ 45-50 ಜನ ಪ್ರಯಾಣಿಕರಿದ್ದಲ್ಲಿ, ಸಂಸ್ಥೆಯಿಂದ ನೇರವಾಗಿ ಅದೇ ಸ್ಥಳದಿಂದ ಸಾರಿಗೆ ಸೌಲಭ್ಯ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವಿಭಾಗೀಯ ಸಂಚಾರ ಅಧಿಕಾರಿಗಳ ಮೊಬೈಲ್ ಸಂಖ್ಯೆ.7760984086 ಹಾಗೂ ಸಹಾಯಕ ಸಂಚಾರ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ.7760993920 ಸಂಪರ್ಕಿಸಬೇಕು. ಸಾರ್ವಜನಿಕ ಭಕ್ತಾಧಿಗಳು ಜಾತ್ರಾ ವಿಶೇಷ ಬಸ್ಸುಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು News Date: 1--4--2019

ಎಲ್ಲಾ ಲೇಖನಗಳು ಆಗಿದೆ News Date: 1--4--2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ News Date: 1--4--2019 ಲಿಂಕ್ ವಿಳಾಸ https://dekalungi.blogspot.com/2019/04/news-date-1-4-2019.html

Subscribe to receive free email updates:

0 Response to "News Date: 1--4--2019"

ಕಾಮೆಂಟ್‌‌ ಪೋಸ್ಟ್‌ ಮಾಡಿ