ಶೀರ್ಷಿಕೆ : NEWS DATE" 25--04--2019
ಲಿಂಕ್ : NEWS DATE" 25--04--2019
NEWS DATE" 25--04--2019
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ:
*********************************************
ಮೂರನೇ ದಿನ ಯಾವುದೇ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ ಇಲ್ಲ
**********************************************************
ಕಲಬುರಗಿ,ಏ.25.(ಕ.ವಾ.). 42-ಚಿಂಚೋಳಿ (ಪ.ಜಾ.) ವಿಧಾನಸಭಾ ಕ್ಷೇತ್ರಕ್ಕೆ 2019ರ ಮೇ 19ರಂದು ನಡೆಯುವ ಉಪ ಚುನಾವಣೆಗಾಗಿ ನಾಮಪತ್ರ ಸಲ್ಲಿಕೆಗೆ ಮೂರನೇ ದಿನವಾದ ಗುರುವಾರದಂದು ಯಾವುದೇ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ ಎಂದು ಚಿಂಚೋಳಿ (ಪ.ಜಾ.) ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸೋಮಶೇಖರ ಅವರು ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 29ರಂದು ಕೊನೆಯ ದಿನವಾಗಿದೆ. ಏಪ್ರಿಲ್ 30ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ಮೇ 2 ರಂದು ಕೊನೆಯ ದಿನವಾಗಿದೆ. ಮೇ 23ರಂದು ಮತ ಎಣಿಕೆ ನಡೆಯಲಿದೆ. ಇಲ್ಲಿವರೆಗೆ ಒಟ್ಟು 02 ಅಭ್ಯರ್ಥಿಗಳಿಂದ 03 ನಾಮಪತ್ರಗಳು ಸಲ್ಲಿಸಿದಂತಾಗಿದೆ.
ಬೆಂಬಲ ಬೆಲೆಯಲ್ಲಿ ತೊಗರಿ ಕಾಳು ಖರೀದಿ:
ರೈತರ ನೋಂದಣಿಗಾಗಿ ಏಪ್ರಿಲ್ 30ರವರೆಗೆ ಕಾಲಾವಧಿ ವಿಸ್ತರಣೆ
ಕಲಬುರಗಿ,ಏ.25.(ಕ.ವಾ.)-ಸರ್ಕಾರದ ದಿನಾಂಕ: 22-04-2019ರ ಆದೇಶದನ್ವಯ 2018-19ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಕಾಳು ಖರೀದಿಗಾಗಿ ಈಗಾಗಲೇ ನೋಂದಣಿ ಮಾಡಿಕೊಳ್ಳದೇ ಬಾಕಿ ಉಳಿದ ರೈತರ ಅನುಕೂಲಕ್ಕಾಗಿ ಕಾಲಾವಧಿಯನ್ನು 2019ರ ಏಪ್ರಿಲ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿಯ ಸದಸ್ಯರು ಹಾಗೂ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ರೈತರು ಸಂಬಂಧಪಟ್ಟ ಖರೀದಿ ಕೇಂದ್ರಗಳಿಗೆ ತೆರಳಿ ತಮ್ಮ ತೊಗರಿ ಕಾಳಿನ ದಾಸ್ತಾನು ಸಲ್ಲಿಸಬೇಕು. ನೋಂದಣಿ ಮಾಡಿಕೊಳ್ಳದೇ ಬಾಕಿ ಉಳಿದ ರೈತರು ಇದರ ಸದುಪಯೋಗ ಪಡೆಯಬೇಕು. ತೊಗರಿ ದಾಸ್ತಾನು ಹೊಂದಿರುವ ರೈತರು ಆಧಾರ ಕಾರ್ಡ ಜೋಡಣೆ ಇರುವ ಬ್ಯಾಂಕ್ ಖಾತೆ ವಿವರವನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚುಗಾರ ಹುದ್ದೆಗೆ ಅರ್ಜಿ ಆಹ್ವಾನ
*********************************************************
ಕಲಬುರಗಿ,ಏ.25.(ಕ.ವಾ.)-ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಕಲಬುರಗಿ ಜಿಲ್ಲಾ ಘಟಕದಲ್ಲಿ ಖಾಲಿಯಿರುವ 01-ಬೆರಳಚ್ಚುಗಾರ ಹಿಂಬಾಕಿ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಈ ಹುದ್ದೆಯನ್ನು ಉಳಿಕೆ ಮೂಲ ವೃಂದದ ಸ್ಥಳೀಯೇತರ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬೆರಳಚ್ಚು ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಕಚೇರಿಯಲ್ಲಿ ಮಾರಾಟ ಮಾಡಲಾಗುವುದಿಲ್ಲ. ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ hಣಣಠಿs://ಜisಣಡಿiಛಿಣs.eಛಿouಡಿಣs.gov.iಟಿ/iಟಿಜiಚಿ/ಞಚಿಡಿಟಿಚಿಣಚಿಞಚಿ/ಞಚಿಟಚಿbuಡಿಚಿgi/ಡಿeಛಿಡಿuiಣ ದಿಂದ ಡೌನ್‍ಲೋಡ್ ಮಾಡಿ ಪಡೆದು ಭರ್ತಿ ಮಾಡಿ ಅರ್ಜಿಗಳೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ (ಲಕೋಟೆಯ ಮೇಲೆ ಹುದ್ದೆಯ ವಿವರವನ್ನು ದಪ್ಪ ಅಕ್ಷರದಲ್ಲಿ ಬರೆದು) 2019ರ ಮೇ 10ರ ಮಧ್ಯಾಹ್ನ 2 ಗಂಟೆಯೊಳಗಾಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಕಲಬುರಗಿ-585102 ಕಚೇರಿಯಲ್ಲಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಷರತ್ತು, ಮೀಸಲಾತಿ, ವಯೋಮಿತಿ, ವೇತನ ಶ್ರೇಣಿ, ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯದ ಮೇಲ್ಕಂಡ ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.
ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ
**************************************************************
ಕಲಬುರಗಿ,ಏ.25.(ಕ.ವಾ.)-2019-20ನೇ ಸಾಲಿಗೆ ಕೆಳಕಂಡ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ಪ್ರತಿಭಾವಂತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿಯ ಶೀರನೂರ ಭಾರತೀಯ ವಿದ್ಯಾ ಕೇಂದ್ರ (ಕನ್ನಡ ಮಾಧ್ಯಮ), ತಾಡತೇಗನೂರ ಸ್ವಾಮಿ ವಿವೇಕಾನಂದ ವಿದ್ಯಾಪೀಠ (ಕನ್ನಡ ಮಾಧ್ಯಮ) ಹಾಗೂ ನಾವದಗಿ ದೇಸಿ ವಿದ್ಯಾ ಕೇಂದ್ರದಲ್ಲಿ (ಕನ್ನಡ ಮಾಧ್ಯಮ) ಹಾಗೂ ಉದನೂರ ರಸ್ತೆಯಲ್ಲಿರುವ ಡಿ.ಡಿ.ಯು. ಇಂಟರ್‍ನ್ಯಾಷನಲ್ ಸ್ಕೂಲ್ (ಇಂಗ್ಲೀಷ ಮಾಧ್ಯಮ) ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಏಪ್ರಿಲ್ 26 ರಿಂದ ಮೇ 6 ರೊಳಗಾಗಿ ಅಫಜಲಪುರ, ಆಳಂದ, ಚಿಂಚೋಳಿ, ಚಿತ್ತಾಪುರ, ಕಲಬುರಗಿ, ಜೇವರ್ಗಿ ಹಾಗೂ ಸೇಡಂ ತಾಲೂಕುಗಳಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕರ ಕಚೇರಿಗಳಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಸಂಬಂಧಪಟ್ಟ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಬೇಕು.
ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದವರಾಗಿರಬೇಕು. 5ನೇ ತರಗತಿಯಲ್ಲಿ ಶೇ. 60ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಯ ತಂದೆ-ತಾಯಿಯವರ ವಾರ್ಷಿಕ ಆದಾಯ 2 ಲಕ್ಷ ರೂ. ದೊಳಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಲೋಕಾಯುಕ್ತ ಅಧಿಕಾರಿಗಳಿಂದ ತಾಲೂಕುವಾರು ಪ್ರವಾಸ
***************************************************
ಕಲಬುರಗಿ,ಏ.25.(ಕ.ವಾ.)-ಕಲಬುರಗಿ ವಿಭಾಗದ ಲೋಕಾಯುಕ್ತ ಅಧಿಕಾರಿಗಳು ಕಲಬುರಗಿ ಜಿಲ್ಲೆಯ ಕೆಳಕಂಡ ತಾಲೂಕುಗಳಲ್ಲಿ ಇದೇ ಏಪ್ರಿಲ್ 27, 29 ಹಾಗೂ 30ರಂದು ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲೋಕಾಯುಕ್ತ ಅಧಿಕಾರಿಗಳಿಗೆ ಸಲ್ಲಿಸಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತÀ ಕಲಬುರಗಿ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಶಾಂತಿನಾಥ ಬಿ.ಪಿ. ಅವರು ಇದೇ ಏಪ್ರಿಲ್ 29 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಚಿತ್ತಾಪುರ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಹಾಗೂ ಏಪ್ರಿಲ್ 30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜೇವರ್ಗಿ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಅಹವಾಲು ಆಲಿಸುವರು.
ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ರಾಘವೇಂದ್ರ ಹೆಚ್.ಎಸ್. ಅವರು ಏಪ್ರಿಲ್ 27 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಅಫಜಲಪುರ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ, ಅಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಆಳಂದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ, ಏಪ್ರಿಲ್ 29 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಚಿಂಚೋಳಿ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಹಾಗೂ ಅಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಸೇಡಂ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಅಹವಾಲು ಆಲಿಸುವರು.
ಈ ಕುರಿತು ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಕಚೇರಿ, ಐವಾನ್ ಶಾಹಿ ಕಂಪೌಂಡ, ಕಲಬುರಗಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ. 08472-263645, 263745ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

“ಬಸವರಾಜ ಕಟ್ಟಿಮನಿಯವರ ಕಥೆಗಳನ್ನು ಕುರಿತ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ”
********************************************************************
ಕಲಬುರಗಿ,ಏ.25.(ಕ.ವಾ.)-ಕನ್ನಡದ ಹೆಸರಾಂತ ಪ್ರಗತಿಶೀಲ ಬರಹಗಾರ, ಕಾದಂಬರಿಕಾರ, ಕಥೆಗಾರ ಬಸವರಾಜ ಕಟ್ಟಿಮನಿಯವರ ಜನ್ಮಶತಮಾನೋತ್ಸವ ವರ್ಷದ ಸಂದರ್ಭದಲ್ಲಿ (1919-2019) “ಬಸವರಾಜ ಕಟ್ಟಿಮನಿಯವರ ಸಣ್ಣ ಕಥೆಗಳನ್ನು ಕುರಿತ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ” ಯೊಂದನ್ನು ಏರ್ಪಡಿಸಿದೆ.
ಈ ಸ್ಪರ್ಧೆಯು ಬಸವರಾಜ ಕಟ್ಟಿಮನಿಯವರ ಸಣ್ಣಕಥೆಗಳನ್ನು ಮಾತ್ರ ಕುರಿತದ್ದಾಗಿರುತ್ತದೆ. ಅವರ ಎಲ್ಲ ಕಥೆಗಳನ್ನು, ಅವುಗಳ ವಸ್ತು, ಧೋರಣೆ, ಪಾತ್ರಗಳು, ಕಥಾಸಂವಿಧಾನ, ಒಟ್ಟು ಪರಿಣಾಮ ಮತ್ತು ವರ್ತಮಾನಕ್ಕೆ ಆ ಕಥೆಗಳು ಪ್ರಸ್ತುತವಾಗುವ ರೀತಿ-ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ವಿಮರ್ಶಾತ್ಮಕವಾಗಿ ಅವಲೋಕಿಸುವ ಪ್ರಬಂಧ ಇದಾಗಿರಬೇಕು ಮತ್ತು ಪ್ರಬಂಧವು ಸ್ವತಂತ್ರವಾಗಿ ಬರೆದುದಾಗಿರಬೇಕು. ಸ್ಪರ್ಧೆಯಲ್ಲಿ ಯಾರಾದರೂ ಪಾಲ್ಗೊಳ್ಳಬಹುದು. ಇಲ್ಲಿ ವಯೋಮಾನದ ನಿರ್ಬಂಧವಿಲ್ಲ ಮತ್ತು ಪ್ರವೇಶ ಧನವಿಲ್ಲ. ಪ್ರಬಂಧವು ಕಟ್ಟಿಮನಿಯವರ ಕೆಲವೇ ಕಥೆಗಳನ್ನು ಕುರಿತಾಗಿರದೇ, ಅವರ ಎಲ್ಲ ಕಥೆಗಳನ್ನು ಸಮಗ್ರವಾಗಿ ಅವಲೋಕನ ಮಾಡಿ ಬರೆದುದಾಗಿರಬೇಕು. ಅಂದರೆ ಇಲ್ಲಿ ಅವರ ಎಲ್ಲ ಕಥೆಗಳನ್ನು ಹೆಸರಿಸುವ ಅಗತ್ಯವಿಲ್ಲವಾದರೂ ಅವೆಲ್ಲವುಗಳ ಹಿಂದಿರುವ ಧೋರಣೆಯನ್ನು ಸಮಗ್ರವಾಗಿ ಗ್ರಹಿಸಿ ಒಟ್ಟುನೋಟದ ರೀತಿಯಲ್ಲಿ ಕಟ್ಟಿಕೊಡುವಂತಿರಬೇಕು. ಪ್ರಬಂಧವು 2500 ರಿಂದ 2700 ಶಬ್ದಗಳ ಮಿತಿಯಲ್ಲಿರಬೇಕು ಮತ್ತು ಸ್ಪಷ್ಟವಾಗಿ ಡಿ.ಟಿ.ಪಿ ಮಾಡಿಸಿ, ದೋಷಗಳನ್ನು ತಿದ್ದಿದ ಲೇಖನವನ್ನೇ ಕಳಿಸಬೇಕು.
ಈ ಪ್ರಬಂಧ ಸ್ಪರ್ಧೆಯಲ್ಲಿ ಮೊದಲ, ಎರಡನೆಯ ಹಾಗೂ ಮೂರನೆಯ ಸ್ಥಾನ ಪಡೆಯುವ ವಿಮರ್ಶಾತ್ಮಕ ಪ್ರಬಂಧಗಳಿಗೆ ಪ್ರತಿಷ್ಠಾನವು ಕ್ರಮವಾಗಿ, ರೂ. 10,000/-, ರೂ. 7000/- ಹಾಗೂ ರೂ. 5000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ಕೊಡಲಾಗುವುದು. ಈ ಬಹುಮಾನಗಳನ್ನು ಹೊರತುಪಡಿಸಿ, ಬಂದ ಪ್ರಬಂಧಗಳಲ್ಲಿ ನಿರ್ಣಾಯಕರು ಸೂಕ್ತವೆಂದು ಪರಿಗಣಿಸುವ ಇನ್ನೂ ಎರಡು ಅಥವಾ ಮೂರನ್ನು ಆಯ್ಕೆ ಮಾಡಿ ಅವುಗಳಿಗೆ ತಲಾ 2,500/- ರೂಪಾಯಿಗಳ ಬಹುಮಾನವನ್ನು ಕೊಡಲಾಗುವುದು. ಆಯ್ಕೆಯಾದ ಪ್ರಬಂಧಗಳನ್ನು ಪ್ರತಿಷ್ಠಾನದಿಂದ ಗ್ರಂಥರೂಪದಲ್ಲಿ ಪ್ರಕಟಿಸಲಾಗುವುದು.
ಲೇಖಕರು ದಿನಾಂಕ: 30-6-2019ರ ಒಳಗೆ ತಮ್ಮ ವಿಮರ್ಶಾತ್ಮಕ ಪ್ರಬಂಧಗಳನ್ನು “ಅಧ್ಯಕ್ಷರು, ಬಸವರಾಜ ಕಟ್ಟಿಮನಿ ಪ್ರತಿಷ್ಠಾನ, ಕುಮಾರ ಗಂಧರ್ವ ರಂಗಮಂದಿರ, ಬೆಳಗಾವಿ-590016” ಈ ವಿಳಾಸಕ್ಕೆ ನೊಂದಾಯಿತ ಅಂಚೆಯ ಮೂಲಕ ಕಳಿಸಬೇಕು. ನಂತರ ಬಂದ ಪ್ರಬಂಧಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗೆ 0831-2474648 ದೂರವಾಣಿಯನ್ನು ಸಂಪರ್ಕಿಸಬಹುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸ್ತಿ ತೆರಿಗೆ ಮೇಲೆ ಶೇ.5ರಷ್ಟು ರಿಯಾಯಿತಿ ಪಡೆಯಲು ಕೇವಲ 4 ದಿನ ಬಾಕಿ
********************************************************************
ಕಲಬುರಗಿ,ಏ.25.(ಕ.ವಾ.)-ಕಲಬುರಗಿ ನಗರ ವ್ಯಾಪ್ತಿಯಲ್ಲಿ ಬರುವ ವಿವಿಧ ಆಸ್ತಿಗಳ ಮಾಲೀಕರು 2019-20ನೇ ಸಾಲಿನ ಆಸ್ತಿ ತೆರಿಗೆ ಮೇಲೆ 5ರಷ್ಟು ರಿಯಾಯಿತಿ ಸೌಲಭ್ಯ ಪಡೆಯಲು ಕೇವಲ 4 ದಿನಗಳು ಮಾತ್ರ ಬಾಕಿ ಇರುತ್ತದೆ. ಬಾಕಿ ಉಳಿಸಿಕೊಂಡಿರುವ ಆಸ್ತಿಗಳ ಮಾಲೀಕರು ಇದೇ ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸಿ ಈ ಸುವರ್ಣಾವಕಾಶದ ಸದುಪಯೋಗ ಪಡೆಯಬೇಕೆಂದು ಕಲಬುರಗಿ ಮಹಾನಗರ ಪಾಲಿಕೆ ಉಪ ಆಯುಕ್ತ ಪ್ರಕಾಶ ಸಿ. ಹರಕುಡೆ ಅವರು ಕೋರಿದ್ದಾರೆ.
ಆಸ್ತಿ ತೆರಿಗೆ ಪಾವತಿ ಮಾಡುವ ಕೇಂದ್ರಗಳ ವಿವರ ಇಂತಿದೆ. ಆಸ್ತಿ ತೆರಿಗೆ ಪಾವತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಮಹಾನಗರ ಪಾಲಿಕೆಯ ವಲಯ ಕಚೇರಿ-3ರ ಆವರಣ ಹಾಗೂ ಖರ್ಗೆ ಪೆಟ್ರೋಲ್ ಬಂಕ್ ಹತ್ತಿರದ ಹೌಸಿಂಗ್ ಬೋರ್ಡ್ ಕಾಂಪ್ಲೆಕ್ಸ್‍ನಲ್ಲಿರುವ ಗುಲಬರ್ಗಾ ಒನ್ ಶಾಖೆಗಳಲ್ಲಿ ಹಾಗೂ ಮಹಾನಗರ ಪಾಲಿಕೆಯ ಹೊಸ ಕಟ್ಟಡದ ಆವರಣದಲ್ಲಿರುವ ಇಂಡಿಯನ್ ಬ್ಯಾಂಕ್‍ನಲ್ಲಿ ವ್ಯವಸ್ಥೆ ಮಾಡಲಾಗಿದೆ.
ಎಸ್.ಎ.ಎಸ್. ನಮೂನೆ ಮುದ್ರಿಸಿ ನೀಡುವ ಕೇಂದ್ರಗಳ ವಿವರ ಇಂತಿದೆ. ಎಸ್.ಎ.ಎಸ್. ನಮೂನೆಯನ್ನು ಮುದ್ರಿಸಿ ನೀಡಲು ಕಲಬುರಗಿ ಸುಪರ ಮಾರ್ಕೇಟ್ ಜನತಾ ಬಜಾರಿನಲ್ಲಿ (ವಿಶೇಷ ಪಾವತಿ ಕೇಂದ್ರದಲ್ಲಿ) 02 ಕೌಂಟರ್‍ಗಳು, ಖರ್ಗೆ ಪೆಟ್ರೋಲ್ ಪಂಪ್ ಹತ್ತಿರದ ಕೆ.ಹೆಚ್.ಬಿ. ಕಾಂಪ್ರೆಕ್ಸ್‍ನಲ್ಲಿರುವ ಗುಲಬರ್ಗಾ ಒನ್‍ನಲ್ಲಿ 02 ಕೌಂಟರ್, ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ಗುಲಬರ್ಗಾ ಒನ್‍ನಲ್ಲಿ 02 ಕೌಂಟರ್ ಹಾಗೂ ಮಹಾನಗರ ಪಾಲಿಕೆ ವಲಯ ಕಚೇರಿ ನಂ. 3ರಲ್ಲಿರುವ ಗುಲಬರ್ಗಾ ಒನ್‍ನಲ್ಲಿ 02 ಕೌಂಟರ್‍ಗಳನ್ನು ಸ್ಥಾಪಿಸಲಾಗಿದೆ. ಇದಲ್ಲದೇ ಮಹಾನಗರ ಪಾಲಿಕೆಯ ವಲಯ ನಂ. 1 ರಲ್ಲಿ 02 ಕೌಂಟರ್ ಹಾಗೂ ವಲಯ ನಂ. 2 ರಲ್ಲಿ 02 ಕೌಂಟರ್ ಹಾಗೂ ಮಹಾನಗರ ಪಾಲಿಕೆ ಹೊಸ ಕಟ್ಟಡದಲ್ಲಿ ತೆರೆಯಲಾಗಿದೆ.
ಮೇಲ್ಕಂಡ ಕೇಂದ್ರಗಳಲ್ಲಿ ಟೆಂಟ್ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಆಸ್ತಿಗಳ ಮಾಲೀಕರು 2019ರ ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸಿ ರಿಯಾಯಿತಿ ಸೌಲಭ್ಯದ ಸದುಪಯೋಗ ಪಡೆದು ತೆರಿಗೆಯಿಂದ ಮುಕ್ತರಾಗಬೇಕೆಂದು ಅವರು ತಿಳಿಸಿದ್ದಾರೆ.

ಮುಟ್ಟುಗೋಲು ಹಾಕಿಕೊಂಡ 15 ವಾಹನಗಳ ಹರಾಜು
**********************************************
ಕಲಬುರಗಿ,ಏ.25.(ಕ.ವಾ.)-ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಕಾಯ್ದೆಯ ಪ್ರಕಾರ ತೆರಿಗೆ ಸಂದಾಯ ಮಾಡದಿರುವ ಹಾಗೂ ವಿವಿಧ ಅಪರಾಧಗಳಿಗಾಗಿ ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಂಡಿರುವ ಒಟ್ಟು 15 ವಾಹನಗಳ ಬಹಿರಂಗ ಹರಾಜು 2019ರ ಮೇ 14ರಂದು ಬೆಳಗಿನ 11.30 ಗಂಟೆಗೆ ಕಲಬುರಗಿ ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ಜರುಗಲಿದೆ ಎಂದು ಉಪ ಸಾರಿಗೆ ಆಯುಕ್ತರು ತಿಳಿಸಿದ್ದಾರೆ.
ಹರಾಜು ಮಾಡುವ ವಾಹನಗಳ ವಿವರ ಇಂತಿದೆ. ಮ್ಯಾಕ್ಸಿಕ್ಯಾಬ್-09, ಜೆಸಿಬಿ-01, ಎಲ್‍ಎಂವಿ (ಸನ್ನಿ ನಿಸಾನ್)-01, ಎಲ್‍ಎಂವಿ (ಟಾಟಾ ಸಫಾರಿ)-01, ಟಾಟಾ ಮ್ಯಾಜಿಕ್-01, ಲ್ಯಾಂಡ್ ರೋವರ್-01 ಹಾಗೂ ಎಲ್‍ಎಂವಿ (ಕಮಾಂಡರ್ ಜೀಪ್)-01. ಕರ್ನಾಟಕ ಮೋಟಾರು ವಾಹನ ತೆರಿಗೆ ನಿಯಮಗಳ ನಿಯಮ 27ಎ ಪ್ರಕಾರ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಹರಾಜಿನಲ್ಲಿ ಭಾಗವಹಿಸುವರು ಮುಂಗಡ ಠೇವಣಿ 5,000 ರೂ.ಗಳ ಸಂದಾಯ ಮಾಡಬೇಕು. ವಾಹನಗಳ ವಿವರ, ವಾಹನ ನಿಲುಗಡೆ ಸ್ಥಳದ ವಿವರ, ಹರಾಜು ನಡೆಯುವ ಸ್ಥಳ, ಮಾದರಿ, ಷರತ್ತು, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಪ್ರಾದೇಶಿಕ ಸಾರಿಗೆ ಉಪ ಆಯುಕ್ತರ ಕಾರ್ಯಾಲಯವನ್ನು ಸಂಪರ್ಕಿಸಲು ಕೋರಲಾಗಿದೆ.

ಮಲೇರಿಯಾ ರೋಗ ನಿರ್ಮೂಲನೆಗೆ ಕರೆ
***********************************
ಕಲಬುರಗಿ,25.ಏ.(ಕ.ವಾ)-ಮಲೇರಿಯಾ ರೋಗವನ್ನು ನಿರ್ಮೂಲನೆ ಮಾಡುವಲ್ಲಿ ನಾಗರಿಕ ಸಮಾಜದ ಗುರುತರ ಜವಾಬ್ದಾರಿಯಾಗಿದ್ದು, ಮಲೇರಿಯಾ ಪ್ರಕರಣಗಳನ್ನು ಸೊನ್ನೆಗೆ ತರುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ. ರಾಜಾ ಹೇಳಿದರು.
ಗುರುವಾರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಸಕ್ತ “ ವಿಶ್ವ ಮಲೇರಿಯಾ ದಿನ” ಘೋಷವಾಕ್ಯ “ಸೊನ್ನೆ ಮಲೇರಿಯಾ ನನ್ನಿಂದ ಪ್ರಾರಂಭ” ಎಂದಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಕೆ.ಪಾಟೀಲ್ ಮಾತನಾಡಿ ಮಲೇರಿಯಾ ರೋಗವು ಅನಾಫಿಲೀಸ್ ಎಂಬ ಹೆಣ್ಣು ಸೋಂಕಿತ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈ ರೋಗವು ವಾರ್ಷಿಕ ಅಂದಾಜು 500 ಮಿಲಿಯನ್ ಜನರನ್ನು ಬಲಿ ತೆಗೆದುಕೊಳ್ಳುತ್ತಿದ್ದು, ಭಾರತದಲ್ಲಿಯೂ ಕೂಡಾ ಮಲೇರಿಯಾದಿಂದ ಸಾಯುವವರ ಸಂಖ್ಯೆ ವಾರ್ಷಿಕ ಕನಿಷ್ಟ 19500 ದಿಂದ 20000 ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ ಎಂದರು.
2013 ರಿಂದ ಕಲಬುರಗಿ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು, 2025 ರೊಳಗಾಗಿ ಮಲೇರಿಯಾ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಗುರಿ ಹೊಂದಲಾಗಿದೆ ಎಂದರು.
ಜಿಲ್ಲಾ ವಿಬಿಡಿಸಿ ಅಧಿಕಾರಿ ಡಾ.ಬಿ.ಎಸ್.ಗುಳಗಿ ಮಾತನಾಡಿ ಇಲಾಖೆಯಿಂದ ಕ್ಷೇತ್ರ ಮಟ್ಟದಲ್ಲಿ ಸಕ್ರೀಯ ಹಾಗೂ ಸ್ಥಿರ ಜ್ವರ ಸಮೀಕ್ಷೆ, ಸೊಳ್ಳೆಗಳ ಉತ್ಪತ್ತಿ ತಾಣಗಳ ಸಮೀಕ್ಷೆ ಹಾಗೂ ಅವುಗಳ ನಿರ್ಮೂಲನೆ, ದೊಡ್ಡ ನೀರಿನ ಆಗರಗಳನ್ನು ಗುರುತಿಸುವಿಕೆ ಹಾಗೂ ಅವುಗಳಲ್ಲಿ ಲಾರ್ವಾಹಾರೊ ಮೀನುಗಳನ್ನು ಬಿಟ್ಟು ಜೈವಿಕ ನಿಯಂತ್ರಣ ಚಟುವಟಿಕೆಗಳನ್ನು ಕೈಗೊಳ್ಳುವುದು, ಮಲೇರಿಯಾ ಸಮಸ್ಯಾತ್ಮಕ ಪ್ರದೇಶಗಳಲ್ಲಿ ಒಳಾಂಗಣ ಕೀಟನಾಶಕ ಸಿಂಪರಣೆಯನ್ನು ಮಾಡುವುದು, ಕೀಟನಾಶಕ ಲೇಪಿತ ಸೊಳ್ಳೆ ಪರದೆಗಳನ್ನು ಮಲೇರಿಯಾ ಪೀಡಿತ ಪ್ರದೇಶಗಳಿಗೆ ನೀಡುವುದು, ಸಮುದಾಯದಲ್ಲಿ ಮಲೇರಿಯಾ ರೋಗದ ಹರಡುವಿಕೆಯ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಡಾ.ಶಿವಶರಣಪ್ಪ ಭೂಸನೂರ, ಡಿಎಸ್‍ಓ ಡಾ.ರಾಜೇಂದ್ರ ಬಾಲ್ಕಿ, ಡಾ.ಶರಣಬಪ್ಪ ಕ್ಯಾತನಾಳ, ಹಾಗೂ ಇನ್ನಿತರ ಕಾರ್ಯಕ್ರಮ ಅಧಿಕಾರಿಗಳು, ಜಿಲ್ಲಾ ಮಟ್ಟದ ಮೇಲ್ವಿಚಾರಕರು ಉಪಸ್ಥಿತರಿದ್ದರು. ಜಿಲ್ಲಾ ಕೀಟಶಾಸ್ತ್ರಜ್ಞ ಚಾಮರಾಜ ದೊಡ್ಡಮನಿ ನಿರೂಪಿಸಿದರೆ ಸಮಾಲೋಚಕ ಕಾರ್ಣಿಕ ಕೊರೆ ವಂದಿಸಿದರು.

ಹೀಗಾಗಿ ಲೇಖನಗಳು NEWS DATE" 25--04--2019
ಎಲ್ಲಾ ಲೇಖನಗಳು ಆಗಿದೆ NEWS DATE" 25--04--2019 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS DATE" 25--04--2019 ಲಿಂಕ್ ವಿಳಾಸ https://dekalungi.blogspot.com/2019/04/news-date-25-04-2019.html
0 Response to "NEWS DATE" 25--04--2019"
ಕಾಮೆಂಟ್ ಪೋಸ್ಟ್ ಮಾಡಿ